ಅಭಿಪ್ರಾಯ / ಸಲಹೆಗಳು

ಹಿನ್ನೆಲೆ

ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ ಮೈಸೂರು ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು. ನಂತರ ಖ್ಯಾತ ಸಾಹಿತಿಗಳಾದ ಶ್ರೀ ಎ ಎನ್ ಮೂರ್ತಿರಾವ್, ಪ್ರೊ. ಸಿ ಕೆ ವೆಂಕಟರಾಮಯ್ಯ, ಖ್ಯಾತ ಶಿಕ್ಷಣ ತಜ್ಞ ಪ್ರೊ. ಕೆ ಎಸ್ ಧರಣೇಂದ್ರಯ್ಯ ಮುಂತಾದವರು ನಿರ್ದೇಶಕರಾಗಿ ಅಕಾಡೆಮಿಯ ಕಾರ್ಯ ನಿರ್ವಹಿಸಿದರು. ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ ‘ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ’ಯು `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು.

ಅಕಾಡೆಮಿಯ ಸ್ವರೂಪವು ಕಾಲದಿಂದ ಕಾಲಕ್ಕೆ ಬದಲಾವಣೆಯನ್ನು ಹೊಂದುತ್ತಾ ಬಂದಿದೆ. ಪ್ರಾರಂಭದಲ್ಲಿ ಅಕಾಡೆಮಿಯ ಕಾರ್ಯವನ್ನು ಸರ್ಕಾರವೇ ನಿರ್ವಹಿಸುತ್ತಿತ್ತು. ರಾಜ್ಯದ ಶಿಕ್ಷಣ ಸಚಿವರು ಅಕಾಡೆಮಿಯ ಅಧ್ಯಕ್ಷರಾಗಿಯೂ ಉಪ ಶಿಕ್ಷಣ ಸಚಿವರು ಉಪಾಧ್ಯಕ್ಷರಾಗಿಯೂ ಇರುತ್ತಿದ್ದರು. ಆನಂತರ ನಾಡಿನ ಹಿರಿಯ ಸಾಹಿತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಪದ್ಧತಿಯನ್ನು ಜಾರಿಗೆ ತರಲಾಗಿದೆ.

ಅಕಾಡೆಮಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಒಂದು ಭಾಗವಾಗಿದ್ದರೂ ಅದಕ್ಕೆ ಆಂತರಿಕ ಸ್ವಾಯತ್ತತೆಯನ್ನು ಕೊಟ್ಟು, ನವೆಂಬರ್ 1977ರಲ್ಲಿ ಕರ್ನಾಟಕ ಸರ್ಕಾರ ಅದರ ಸಂವಿಧಾನದಲ್ಲಿ ಅನೇಕ ತಿದ್ದುಪಡಿಯನ್ನ್ಲು ಮಾಡಿ ಅಕಾಡೆಮಿಗಳ ಸನ್ನದನ್ನು (ಚಾರ್ಟರ್) ಪ್ರಕಟಿಸಿದೆ. ಅದರ ಪ್ರಕಾರ ಅಕಾಡೆಮಿಯ ಅಧ್ಯಕ್ಷ ಹಾಗೂ ಸದಸ್ಯರನ್ನು ಸರ್ಕಾರವೇ ನಾಮಕರಣ ಮಾಡುತ್ತದೆ. ಈ ನಾಮನಿರ್ದೇಶಿತ ಮಂಡಳಿಯು ಸಹ-ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರವನ್ನು ಹೊಂದಿರುತ್ತದೆ. ಅಕಾಡೆಮಿಯ ನಿಯತ ಕಾರ್ಯನಿರ್ವಹಣೆಗೆ ಒಂದು ಕಾರ್ಯ ನಿರ್ವಾಹಕ ಸಮಿತಿಯನ್ನು ರೂಪಿಸಿಕೊಳ್ಳಬಹುದಾಗಿದೆ. ಅಲ್ಲದೆ, ಅಗತ್ಯಕ್ಕೆ ತಕ್ಕಂತೆ ಉಪ-ಸಮಿತಿಗಳನ್ನು ರಚಿಸಿಕೊಳ್ಳುವ ಅಧಿಕಾರ ಅಕಾಡೆಮಿಗೆ ಇದೆ. ಅಕಾಡೆಮಿಯ ಅಧ್ಯಕ್ಷರು, ರಿಜಿಸ್ಟ್ರಾರರು ಮತ್ತು ಅರ್ಥ ಸದಸ್ಯರು ಅಕಾಡೆಮಿಯ ಪದಾಧಿಕಾರಿಗಳಾಗಿರುತ್ತಾರೆ. ರಿಜಿಸ್ಟ್ರಾರ್ ಮತ್ತು ಅರ್ಥ ಸದಸ್ಯರಾದ ಲೆಕ್ಕಾಧಿಕಾರಿಗಳು ಸರ್ಕಾರಿ ಅಧಿಕಾರಿಗಳಾಗಿರುತ್ತಾರೆ. ರಿಜಿಸ್ಟ್ರಾರರು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ ಆಗಿರುತ್ತಾರೆ.

 

 

 

ಇತ್ತೀಚಿನ ನವೀಕರಣ​ : 20-12-2022 12:13 PM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080